ಉಡುಪಿ: ಲೇಖಕ ಎಚ್.ವಿ. ನಾಗರಾಜ ರಾವ್ ಅವರು 2025ನೇ ಸಾಲಿನ ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಸಂಶೋಧನ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ 16 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.