ADVERTISEMENT

ಕಾರ್ಕಳದಿಂದ ಪ‍ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಮುತಾಲಿಕ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 18:49 IST
Last Updated 23 ಜನವರಿ 2023, 18:49 IST
   

ಕಾರ್ಕಳ (ಉಡುಪಿ): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವು
ದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಾವಿರಾರು ಹಿಂದೂ ಕಾರ್ಯಕರ್ತರ ನೋವಿನ ಧ್ವನಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ’ ಎಂದು ಹೇಳಿದ ಅವರು ‘ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋಕಳ್ಳ ತನ ನಡೆಯುತ್ತಿರುವುದು ಕಾರ್ಕಳ ಕ್ಷೇತ್ರದಲ್ಲಿ. ಇಲ್ಲಿನ ಹಿಂದೂ ಕಾರ್ಯಕರ್ತರ ಹೆಸರನ್ನು ಗೂಂಡಾ
ಮತ್ತು ರೌಡಿ ಪಟ್ಟಿಯಲ್ಲಿ ಸೇರಿಸ ಲಾಗಿದೆ’ ಎಂದು ದೂರಿದರು.

‘12 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರು ಸಲ್ಲಿಸಿರುವ ವರದಿಯ ಆಧಾರದಲ್ಲಿ ಕಾರ್ಕಳವನ್ನು ಸ್ಪರ್ಧೆಗೆ ಅಯ್ಕೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿದ್ದು ಅದರ ವಿರುದ್ಧ ಹೋರಾಟ ಹಾಗೂ ಹಿಂದುತ್ವವೇ ನನ್ನ ಧ್ಯೇಯ. ಕಾರ್ಕಳದಲ್ಲಿ ಫೆಬ್ರುವರಿ 5ರಂದು ಕಾರ್ಯಾಲಯ ಉದ್ಘಾಟನೆಯಾಗಲಿದ್ದು ಕಲಬುರಗಿ ಜಿಲ್ಲೆ ಆಂದೋಲದ ಸಿದ್ಧಲಿಂಗ ಶ್ರೀ ಸೇರಿದಂತೆ ಎಂಟಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗವಹಿಸಿ ಗೋಪೂಜೆ ನೆರವೇರಿಸಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.