ADVERTISEMENT

ಕೆಎಂಸಿ: ಐಸಿಯು, ವೆಂಟಿಲೇಟರ್ ಬೆಡ್‌ಗಳ ಕೊರತೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 13:05 IST
Last Updated 14 ಏಪ್ರಿಲ್ 2021, 13:05 IST

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸಧ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್‌ಗಳ ತೀವ್ರ ಕೊರತೆ ಉಂಟಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ಮೊದಲು ಐಸಿಯು ಹಾಗೂ ವೆಂಟಿಲೇಟರ್‌ ಹಾಸಿಗೆಗಳು ಲಭ್ಯವಿರುವ ಬಗ್ಗೆ ದೃಢೀಕರಿಸಿಕೊಂಡು ಬರಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ರೋಗಿಗಳಿಗೆ ಅನಾನುಕೂಲತೆ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂ, ರೋಗಿಗಳು, ಅಂಬುಲೆನ್ಸ್‌ಗಳು ಹಾಗೂ ಸೇವಾ ಪೂರೈಕೆದಾರರು ಕೆಎಂಸಿಗೆ ಬರುವ ಮುನ್ನ 9686692603 ನಂಬರ್‌ಗೆ ಕರೆಮಾಡಿ ಮಾಹಿತಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT