
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಹೆಬ್ರಿ: ತಾಲ್ಲೂಕಿನ ನಾಡ್ಪಾಲು ಮತ್ತು ಹೆಬ್ರಿ ಗ್ರಾಮದ ಬಾಕಿ ಉಳಿದಿರುವ ಅಕ್ರಮ–ಸಕ್ರಮ ಅರ್ಜಿಗಳ ವಿಲೇವಾರಿಗೆ ಜಂಟಿ ಸರ್ವೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಸುವಂತೆ ಮುಖ್ಯಮಂತ್ರಿ ಆದೇಶ ಮಾಡಿದ್ದಾರೆ.
ಕೆಪಿಸಿಸಿ ಸದಸ್ಯ ನೀರೆ ಕೃಷ್ಣಶೆಟ್ಟಿ ಅವರು ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು. ಅಕ್ರಮ–ಸಕ್ರಮ ಅರ್ಜಿಗಳ ವಿಲೇವಾರಿಗೆ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆಯನ್ನು ನಡೆಸಿ ಅಕ್ರಮ ಸಾಗುವಳಿ ಮಾಡಿದವರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾಧಿಕಾರಿ, ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಜಂಟಿ ಸರ್ವೆ ನಡೆಸುವಂತೆ ಉಡುಪಿ ಜಿಲ್ಲಾಧಿಕಾರಿ ಕೂಡ ಡಿಎಫ್‌ಒ ಮತ್ತು ಹೆಬ್ರಿ ತಹಶೀಲ್ಧಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.