ಕಾರ್ಕಳ: ನಿಟ್ಟೆ ಗ್ರಾಮದ ಕೆಮ್ಮಣ್ಣುಹಿತ್ಲು ಎಂಬಲ್ಲಿ ಶಾಂಭವಿ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪಿಕ್‌ಅಪ್ ವಾಹನದ ಚಾಲಕ ಮತ್ತು ಮಾಲೀಕ ಒಟ್ಟಿಗೆ ಸೇರಿ ಅಂದಾಜು ₹1,000 ಮೌಲ್ಯದ 20 ಬುಟ್ಟಿ ಮರಳನ್ನು ವಾಹನಕ್ಕೆ ತುಂಬಿಸುತ್ತಿದ್ದರು. ಪೊಲೀಸರನ್ನು ಕಂಡು ಅವರು ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಸಿ.ಎಚ್.ಸಿ. ಚಂದ್ರಶೇಖರ ಸ್ಥಳಕ್ಕೆ ಭೇಟಿ ನೀಡಿದ್ದರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.