ADVERTISEMENT

ಪಡುಬಿದ್ರಿ ಕೆಪಿಎಸ್‌ನಲ್ಲಿ ಪ್ರಾರಂಭೋತ್ಸವ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 13:04 IST
Last Updated 4 ಜೂನ್ 2025, 13:04 IST
ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವುದಲ್ಲಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಲಾಯಿತು. 
ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವುದಲ್ಲಿ ಮಕ್ಕಳಿಗೆ ಪುಸ್ತಕವನ್ನು ವಿತರಿಸಲಾಯಿತು.    

ಪಡುಬಿದ್ರಿ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳನ್ನು ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಿ ಕರೆ ತರಲಾಯಿತು.

ಹೊಸದಾಗಿ ದಾಖಲುಗೊಂಡ ಎಲ್‌ಕೆಜಿ, ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಬಲೂನ್ ನೀಡಲಾಯಿತು. ವಿದ್ಯಾರ್ಥಿಗಳನ್ನು ಶಾಲೆಯ ಪ್ರವೇಶ ದ್ವಾರದಿಂದ ಬ್ಯಾಂಡ್ ವಾದನ, ಪುಷ್ಪಾರ್ಚನೆ ಮಾಡಿ ಮೆರವಣಿಗೆ ಮೂಲಕ ಕರೆ ತರಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಸುಮಾ ಮಾತನಾಡಿ, ಪೊಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನಮ್ಮ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಿ ಉತ್ತಮ ವಿದ್ಯಾರ್ಥಿಯನ್ನಾಗಿ ಮಾಡುತ್ತೇವೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೇಮಚಂದ್ರ ಮಾತನಾಡಿ, ಈ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕ ವೃಂದವಿದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಬೋರ್ಡ್ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಕಾಲೇಜು ವಿಭಾಗದ ಅಜಯ್, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಅಲ್ಪಿನ್ ಭಾಗವಹಿಸಿದ್ದರು. ಫ್ರೌಢಶಾಲೆ ಮುಖ್ಯಶಿಕ್ಷಕಿ ಗೀತಾ ಶೆಟ್ಟಿ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಜೈನ್ಟ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.