ಉಡುಪಿ: ವ್ಯಕ್ತಿಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ಶರಣ ಬಸವ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶರಣ ಬಸವ ಅವರು ಸುಮಂತ್ ಎಂಬುವವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ವಿಚಾರವನ್ನು ಸುಮಂತ್ ಅವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದು, ಯಾವುದೇ ದೂರು ಬೇಡ ಎಂದು ತಿಳಿಸಿದ್ದರು. ಬಳಿಕ ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.