ADVERTISEMENT

‘ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ನಡೆಯಲಿ’

ಬ್ರಹ್ಮಾವರ: ಸ್ವಾಂತ್ರ್ಯೋತ್ಸವ ಆಚರಣೆ, ಸಾಧಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 3:56 IST
Last Updated 16 ಆಗಸ್ಟ್ 2022, 3:56 IST
ಚಿತ್ರ( ೧೫ಬಿವಿಆರ್ ಬ್ರಹ್ಮಾವರ) ಬ್ರಹ್ಮಾವರ ತಾಲ್ಲೂಕು ಆಡಳಿತ ವತಿಯಿಂದ ಸೋಮವಾರ ನಡೆದ ೭೬ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ತಹಶೀಲ್ದಾರ್ ರಾಜಶೇಖರಮೂರ್ತಿ ಪಥಸಂಚಲನದ ವಂದನೆ ಸ್ವೀಕರಿಸಿದರು.
ಚಿತ್ರ( ೧೫ಬಿವಿಆರ್ ಬ್ರಹ್ಮಾವರ) ಬ್ರಹ್ಮಾವರ ತಾಲ್ಲೂಕು ಆಡಳಿತ ವತಿಯಿಂದ ಸೋಮವಾರ ನಡೆದ ೭೬ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ತಹಶೀಲ್ದಾರ್ ರಾಜಶೇಖರಮೂರ್ತಿ ಪಥಸಂಚಲನದ ವಂದನೆ ಸ್ವೀಕರಿಸಿದರು.   

ಬ್ರಹ್ಮಾವರ: ‘ಸಂವಿಧಾನವನ್ನು ಮೀರಿ ಇಂದು ಕೆಲಸವಾಗುತ್ತಿದೆ. ಮೂಲಭೂತ ವಾಗಿ ನಮಗೆ ಏನಾಗಬೇಕಿದೆ ಎನ್ನುವ ಆಲೋಚನೆಯನ್ನು ಜನಪ್ರತಿನಿಧಿಗಳು, ಅಧಿಕಾರಿಗಳು, ನಾಗರಿಕರು ತಿಳಿದುಕೊಂಡಲ್ಲಿ ನಾವು ಆರ್ಥಿಕವಾಗಿ ಸದೃಢರಾಗಿ ನಿಜವಾದ ಸ್ವಾತಂತ್ರ್ಯದ ಅನುಭವ ಪಡೆಯಬಹುದು’ ಎಂದು ಹಿರಿಯ ವಕೀಲ ಟಿ.ಬಿ.ಶೆಟ್ಟಿ ಹೇಳಿದರು.

ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಸೋಮವಾರ ಬ್ರಹ್ಮಾವರ ತಾಲ್ಲೂಕು ಮಟ್ಟದ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅವರು ಮಾತನಾಡಿದರು.

‘ನಾವೆಲ್ಲರೂ ಒಂದೇ ಎನ್ನುವ ಭಾವನೆಯನ್ನು ಅರ್ಥೈಸಿ ಕೊಂಡು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವುದೇ ನಿಜವಾದ ಸ್ವಾತಂತ್ರ್ಯ’ ಎಂದರು.

ADVERTISEMENT

ಇದಕ್ಕೂ ಮುನ್ನ ಬ್ರಹ್ಮಾವರದ ತಹಶೀಲ್ದಾರ್ ರಾಜಶೇಖರ ಮೂರ್ತಿ ಧ್ವಜಾರೋಹಣ ನೆರವೇರಿಸಿ, ಹಿರಿಯರು ಮಕ್ಕಳಿಗೆ ಆಸ್ತಿಯನ್ನು ನೀಡುವು ದರೊಂದಿಗೆ ಅವರ ಜವಾಬ್ದಾರಿ, ಸಂಸ್ಕೃತಿಯನ್ನ ಹಸ್ತಾಂತರಿಸುವ ಕಾರ್ಯದ ಬಗ್ಗೆ ಮನೆ, ಶಾಲೆಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ತುಂಬಿಸುವ ಕೆಲಸವಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಆಕರ್ಷಕ ಪಥಸಂಚಲನ: ಬ್ರಹ್ಮಾವರದ ಸಬ್‌ ಇನ್‌ಸ್ಪೆಕ್ಟರ್‌ ಗುರುನಾಥ್‌ ಬಿ. ಹಾದಿಮನಿ ನೇತೃತ್ವದಲ್ಲಿ ನಡೆದ ಆಕರ್ಷಕ ಪಥಸಂಚಲನದಲ್ಲಿ ಪೊಲೀಸರು, ಗೃಹರಕ್ಷಕ ದಳದ ಸಿಬ್ಬಂದಿ ಮತ್ತು ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜು, ನಿರ್ಮಲಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಮೆರುಗನ್ನು ನೀಡಿದರು.

ಬ್ರಹ್ಮಾವರ ಇನ್‌ಸ್ಪೆಕ್ಟರ್‌ ಅನಂತ ಪದ್ಮನಾಭ, ಕೋಟದ ಸಬ್‌ ಇನ್‌ಸ್ಪೆಕ್ಟರ್‌ ಮಧು, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ.ನಾಯ್ಕ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಂದಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ನಿರಂಜನ ಪೂಜಾರಿ, ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ಉಪ ತಹಶೀಲ್ದಾರ್ ರಾಘವೇಂದ್ರ, ಅಧ್ಯಾಪಕ ಶಶಿಧರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.