ಹೆಬ್ರಿ: ಹೆಬ್ರಿ ತಾಲ್ಲೂಕು ಮುದ್ರಾಡಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ರಾಡಿ ಕಾರ್ಯಕ್ಷೇತ್ರದ ಸತ್ಯಶ್ರೀ ಸಂಘದ ಸದಸ್ಯರಾದ ಹರೀಶ್ ಕುಲಾಲ್ ಅವರು ಇತ್ತೀಚೆಗೆ ಮೃತರಾಗಿದ್ದು, ಅವರ ಕುಟುಂಬ ಸದಸ್ಯರಿಗೆ ವಿಮಾ ಪರಿಹಾರದ ಆದೇಶ ಪತ್ರವನ್ನು ವಿತರಿಸಲಾಯಿತು.
ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ಮಂಜೂರಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಹಿರಿಯರಾದ ಗಣಪತಿ ಮುದ್ರಾಡಿ, ವಲಯದ ನಿಕಟಪೂರ್ವ ಅಧ್ಯಕ್ಷ ರತ್ನಕರ ಪೂಜಾರಿ, ಮುದ್ರಾಡಿ ಒಕ್ಕೂಟದ ಅಧ್ಯಕ್ಷ ಸುಬ್ರಾಯ ಆಚಾರ್ಯ, ಶಿಕ್ಷಕ ಚಂದ್ರಶೇಖರ ಭಟ್, ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ, ವಲಯ ಮೇಲ್ವಿಚಾರಕಿ ಸುಮಲತಾ, ಸೇವಾಪ್ರತಿನಿಧಿ ಮಮತ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.