ADVERTISEMENT

ಉಡುಪಿ | ಪ್ರಜಾಪ್ರಭುತ್ವದ ಆಶಯ ರಕ್ಷಣೆ ಎಲ್ಲರ ಕರ್ತವ್ಯ: ಶಾಸಕ ಯಶ್‌ಪಾಲ್ ಸುವರ್ಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:42 IST
Last Updated 15 ಸೆಪ್ಟೆಂಬರ್ 2025, 4:42 IST
<div class="paragraphs"><p>ಬೈಕ್ ರ‍್ಯಾಲಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು</p></div>

ಬೈಕ್ ರ‍್ಯಾಲಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು

   

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೋಲೀಸ್ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಉಡುಪಿಯಿಂದ ಬೆಂಗಳೂರು ವಿಧಾನಸೌಧದವರೆಗೆ ಆಯೋಜಿಸಿರುವ ಬೈಕ್ ರ‍್ಯಾಲಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಭಾನುವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ ಎಲ್ಲರ ಕರ್ತವ್ಯ. ಪ್ರಜಾಪ್ರಭುತ್ವ ತತ್ವಗಳು ಜಾಗೃತಿಗೊಳಿಸಿ ಅದರ ಮಹತ್ವಗಳನ್ನು ಸಾರುವ ಸಲುವಾಗಿ ಈ ಬಾರಿ ನನ್ನ ಮತ ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ADVERTISEMENT

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಮಾತನಾಡಿ, ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ವಿಶ್ವದಾದ್ಯಂತ ಸೆಪ್ಟೆಂಬರ್ 15ರಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ರೋಷನ್, ರೋಷನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.