ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಉದ್ಘಾಟಿಸಿದರು
ಉಡುಪಿ: ಯೋಗವೆಂದರೆ ಕೇವಲ ವ್ಯಾಯಾಮ, ಪ್ರಾಣಾಯಾಮ ಮಾತ್ರವಲ್ಲ, ಅದೊಂದು ಆರೋಗ್ಯಕರ ಜೀವನದ ವಿಧಾನ. ಅದು ದೈನಂದಿನ ಜೀವನದ ಭಾಗವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದರು.
ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಹೇಳಿದರು.
ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಡಿಎಫ್ಒ ಗಣಪತಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ, ಕ್ರೀಡಾ ಇಲಾಖೆ ಉಪ ನಿರ್ದೇಶಕ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.