ಉಡುಪಿ: ‘ಕೇಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ಬರುವ ಜನೌಷಧಿ ಕೇಂದ್ರಗಳನ್ನು ಆಸ್ಪತ್ರೆಯ ಆವರಣದೊಳಗಿದ್ದರೆ ಮುಚ್ಚಬೇಕೆಂಬ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ವಾಪಾಸು ಪಡೆಯಬೇಕು’ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಗುರುವಾರ ಇಲ್ಲಿ ಮಾತನಾಡಿದ ಅವರು, ‘ಜನಔಷಧಿ ಕೇಂದ್ರದಲ್ಲಿ ಕಡಿಮೆ ದರದಲ್ಲಿ ರೋಗಿಗಳಿಗೆ ಔಷಧ ಸಿಗುತ್ತಿದ್ದು, ದೇಶದಲ್ಲಿ ₹2 ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತಿದೆ’ ಎಂದರು.
ಗೃಹಸಚಿವ ಪರಮೇಶ್ವರ್ ಅವರ ಸಂಸ್ಥೆಗಳ ಮೇಲಿನ ಜಾರಿ ನಿರ್ದೇಶನಾಲಯದ (ಇಡಿ) ಶೋಧ ಕಾರ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅದರಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಇಲ್ಲ. ಅದೊಂದು ಸ್ವತಂತ್ರ ಸಂಸ್ಥೆ ಎಂದು ಮನಮೋಹನ್ ಸಿಂಗ್ ಅವರೇ ಹೇಳಿದ್ದರು. ತಮ್ಮ ರಕ್ಷಣೆಗೋಸ್ಕರ ಮುಖ್ಯಮಂತ್ರಿ ಅವರು ದಲಿತ ನಾಯಕನ ವಿರುದ್ಧ ಇಡಿ ಶೋಧ ನಡೆಯುತ್ತಿದೆ ಎಂದು ಬಿಂಬಿಸುತ್ತಿದ್ದಾರೆ’ ಎಂದರು.
‘ಅಪರಾಧ ಇರುವ ಕಡೆ ಶೋಧ ನಡೆಯುತ್ತದೆ. ಅವರವರ ಭಾವನೆಗೆ ತಕ್ಕಂತೆ ಮಾತನಾಡುತ್ತಿದ್ದಾರೆ. ದಾಳಿಯನ್ನು ಜಾತಿ ವರ್ಗ ಸಮಾಜಕ್ಕೆ ಸೀಮಿತ ಮಾಡಬೇಡಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.