ADVERTISEMENT

ಪ್ರಬುದ್ಧರ ಗೋಷ್ಠಿ ಇಂದು: ವಿದೇಶಾಂಗ ಸಚಿವ ಜೈಶಂಕರ್ ಭಾಗಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 16:09 IST
Last Updated 18 ಮಾರ್ಚ್ 2023, 16:09 IST
ಮಾರ್ಚ್ 19ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಬಂದಿಳಿದ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು.
ಮಾರ್ಚ್ 19ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಬಂದಿಳಿದ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು.   

ಉಡುಪಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಅವರು ಮಾರ್ಚ್ 19ರಂದು ಮಧ್ಯಾಹ್ನ 2ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಉದ್ಯಮಿಗಳು, ಎಂಜಿನಿಯರ್‌ಗಳು, ಲೆಕ್ಕ ಪರಿಶೋಧಕರು, ವಕೀಲರು ಹಾಗೂ ವಿವಿಧ ಕ್ಷೇತ್ರಗಳ ಪ್ರಬುದ್ಧರು ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸಮಾವೇಶದಲ್ಲಿ ಭಾಗವಹಿಸಲು ಶನಿವಾರ ಉಡುಪಿಗೆ ಬಂದಿಳಿದ ಎಸ್.ಜೈಶಂಕರ್ ರವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ವಿದೇಶಾಂಗ ಸಚಿವರಾದ ಬಳಿಕ ಮೊದಲ ಬಾರಿಗೆ ಜೈಶಂಕರ್ ಉಡುಪಿಗೆ ಆಗಮಿಸಿದ್ದಾರೆ.

ADVERTISEMENT

ಈ ಸಂದರ್ಭ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್.ಕಲ್ಮಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ಧರ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಪಾಂಡುರಂಗ ಲಾಗ್ವನಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.