ಡಿ.ಕೆ ಶಿವಕುಮಾರ್
ಉಡುಪಿ: ಬಿಜೆಪಿ ಮತ್ತು ಜೆಡಿಎಸ್‍ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಶನಿವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿಯವರಿಗೆ ಬೇರೆ ವೃತ್ತಿ ಇಲ್ಲ ಎಂದರು.
ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೇ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ ಎಂದರು.
ಮೈಸೂರು ದಸರಾ ಹಾಗೂ ರಾಜಮಾತೆ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.