ಕಾರ್ಕಳ: ಅಡುಗೆ ಮನೆಯ ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ಈಚೆಗೆ ನಡೆದಿದೆ.
ಗ್ರಾಮದ ಕಂಗಿತ್ಲು ಎಂಬಲ್ಲಿನ ನಿವಾಸಿ ಉಷಾ ಅವರ ನಿರೀಕ್ಷಾ ನಿವಾಸ ಎಂಬ ಮನೆಯ ಗೋದ್ರೆಜ್‌ನಲ್ಲಿ ಹಾಗೂ ಸ್ಟೀಲಿನ ಡಬ್ಬದಲ್ಲಿರಿಸಿದ್ದ ₹ 4.5 ಲಕ್ಷ ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.