ADVERTISEMENT

ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ

ವಕೀಲರ ದಿನಾಚರಣೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 20:15 IST
Last Updated 3 ಡಿಸೆಂಬರ್ 2019, 20:15 IST
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಭಾರತದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಉಡುಪಿ: ದೇಶದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರದ ವಿರುದ್ಧ ವಕೀಲರು ಕಾನೂನು ಹೋರಾಟ ಮಾಡಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಸಲಹೆ ನೀಡಿದರು.

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಕೀಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ವಕೀಲರು ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯಬೇಕು. ಯಾವುದೇ ವ್ಯಕ್ತಿಯ ಸ್ವಾತಂತ್ರ್ಯ ಹರಣವಾದರೆ ಅದರನ್ನು ರಕ್ಷಿಸಬೇಕು ಎಂದರು.

ಒಂದು ದೇಶದ ಬೆಳವಣಿಯನ್ನು ಅಲ್ಲಿನ ನ್ಯಾಯಾಂಗ ವ್ಯವಸ್ಥೆಯ ಜತೆಗೆ ತುಲನೆ ಮಾಡಲಾಗುತ್ತದೆ. ನ್ಯಾಯದಾನ ಪ್ರಕ್ರಿಯೆ ಪಾರದರ್ಶಕವಾಗಿದ್ದರೆ, ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ವಕೀಲರು ಹಾಗೂ ನ್ಯಾಯಾಧೀಶರು ರಥದ ಚಕ್ರಗಳಿದ್ದಂತೆ. ಒಟ್ಟಾಗಿ ಸಾಗಿದರೆ ಸಮಸ್ಯೆ ಉದ್ಭವಿಸುವುದಿಲ್ಲ. ಪ್ರತಿಯೊಬ್ಬರೂ ಅವರ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ವಕೀಲ ವೃತ್ತಿ ಇತರೆ ವೃತ್ತಿಗಳಿಗಿಂತ ಶ್ರೇಷ್ಠ ಹಾಗೂ ಗೌರವಯುತವಾದುದ್ದು. ಸಮಾಜಕ್ಕೆ ಸಹಾಯ ಮಾಡುವ ಅಶಕ್ತರಿಗೆ ನೆರವಾಗುವ ಅವಕಾಶ ಸಿಗುತ್ತದೆ. ವೃತ್ತಿ ಗೌರವ ಕಾಪಾಡಿದರೆ, ಮರಣಾನಂತರವೂ ಜನರು ಸ್ಮರಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ.ಜೋಷಿ, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನಾಲ್ಡ್‌ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.