ADVERTISEMENT

ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2025, 14:15 IST
Last Updated 26 ಫೆಬ್ರುವರಿ 2025, 14:15 IST
ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು
ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು   

ಹೆಬ್ರಿ: ಕಾಡುಹೊಳೆ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರ ಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಯಂಗಡಿ ರಾಘವೇಂದ್ರ ಭಟ್ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತ್‌ ಅಜಿಲ ಸಹಕಾರದಲ್ಲಿ ನಡೆಯಿತು.

ಸಿದ್ದಿ ವಿನಾಯಕ ಭಜನಾ ಮಂಡಳಿ ತೆಳ್ಳಾರು ಕಾರ್ಕಳ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ‌ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು, ನೂರಾರು ಭಕ್ತರು ಭಾಗವಹಿಸಿದ್ದರು. ರಾತ್ರಿ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಮಹಾಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ 44ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಆಹೋರಾತ್ರಿ ಭಜನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT