ಉಡುಪಿ: ಯಕ್ಷಗಾನ ಕಲಾರಂಗವು ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ ಪೆರ್ಲ ಕೃಷ್ಣ ಭಟ್ ಅವರ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಅರ್ಥಧಾರಿಗಳು ಹಾಗೂ ಹವ್ಯಾಸಿ ವೇಷಧಾರಿಗಳಾದ ಜಿ.ಎಲ್. ಹೆಗಡೆ ಹಾಗೂ ಸರ್ಪಂಗಳ ಈಶ್ವರ ಭಟ್ ಆಯ್ಕೆಯಾಗಿದ್ದಾರೆ.
ಜುಲೈ 12 ರಂದು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು ತಲಾ ₹20 ಸಾವಿರ ನಗದು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.