ADVERTISEMENT

‘ಸಾಂಸ್ಕೃತಿಕ ಕಲರವ’ ಸ್ಪರ್ಧಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ಮೇ 2025, 13:36 IST
Last Updated 7 ಮೇ 2025, 13:36 IST
ಕರ್ನಾಟಕ ರಾಜ್ಯ ನಾಯರಿ ಸಮಾಜ ಸುಧಾರಕ ಸಂಘ ಬ್ರಹ್ಮಾವರ ಘಟಕದ ವತಿಯಿಂದ ಸಮಾಜ ಬಾಂಧವರಿಗಾಗಿ ಸಾಂಸ್ಕೃತಿಕ ಕಲರವ ಸ್ಪರ್ಧಾ ಕಾರ್ಯಕ್ರಮ ನಡೆಯಿತು
ಕರ್ನಾಟಕ ರಾಜ್ಯ ನಾಯರಿ ಸಮಾಜ ಸುಧಾರಕ ಸಂಘ ಬ್ರಹ್ಮಾವರ ಘಟಕದ ವತಿಯಿಂದ ಸಮಾಜ ಬಾಂಧವರಿಗಾಗಿ ಸಾಂಸ್ಕೃತಿಕ ಕಲರವ ಸ್ಪರ್ಧಾ ಕಾರ್ಯಕ್ರಮ ನಡೆಯಿತು   

ಕೋಟ(ಬ್ರಹ್ಮಾವರ): ಕರ್ನಾಟಕ ರಾಜ್ಯ ನಾಯರಿ ಸಮಾಜ ಸುಧಾರಕ ಸಂಘ ಬ್ರಹ್ಮಾವರ ಘಟಕದ ವತಿಯಿಂದ ಸಮಾಜ ಬಾಂಧವರಿಗಾಗಿ ‘ಸಾಂಸ್ಕೃತಿಕ ಕಲರವ’ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ ನಾಯರಿ ಅಧ್ಯಕ್ಷತೆ ವಹಿಸಿದ್ದರು. ಕೋಟ ಮಣೂರಿನ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ ಕುಂದರ್ ಉದ್ಘಾಟಿಸಿದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಉಡುಪಿ ಅರಣ್ಯ ಇಲಾಖೆಯ ಅಧಿಕಾರಿ ವಾರಿಜಾಕ್ಷಿ ನಾಯರಿ, ಸಂಘದ ಗೌರವಾಧ್ಯಕ್ಷ ಸಿ.ಮಂಜುನಾಥ ನಾಯರಿ, ವಿ.ಶಿವಕುಮಾರ ನಾಯರಿ, ಸಿ.ಎಂ ರಾಮಚಂದ್ರ ನಾಯರಿ ಕಾರ್ತಟ್ಟು ಇದ್ದರು.

ADVERTISEMENT

ಸಂಘದ ಮಾಜಿ ಅಧ್ಯಕ್ಷ ಮರುಳೀಧರ ನಾಯರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕಾರ್ಯದರ್ಶಿ ವಿಜಯ ಕೆ ನಾಯರಿ ಸ್ವಾಗತಿಸಿದರು. ಕೋಶಾಧಿಕಾರಿ ಜಯರಾಮ ನಾಯರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.