
ಕುಂದಾಪುರ: ವಿವಿದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆದ ಮಂಡಾಡಿ ಹೋರ್ವರಮನೆ ಸಾಂಪ್ರದಾಯಿಕ ಕಂಬಳೋತ್ಸವದಲ್ಲಿ ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕಾರ್ಕಳ ಭಾಗದ 50ಕ್ಕೂ ಅಧಿಕ ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆ ಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ಸಬ್ ಜೂನಿಯರ್ ವಿಭಾಗ, ಕೆಸರು ಗದ್ದೆ ಓಟ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ವಿಜೇತ ಕೋಣಗಳ ಮಾಲೀಕರು, ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾಳುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೋಟ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್, ಮಂಡಾಡಿ ರತ್ನಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಆನಂದ ಸಿ.ಕುಂದರ್ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ ನ್ಯೂ ಮೆಡಿಕಲ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ.ರಂಜನ್ ಶೆಟ್ಟಿ, ವಂಡ್ಸೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ ಬಿದ್ದಲ್‌ಕಟ್ಟೆಯ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ, ಉದ್ಯಮಿಗಳಾದ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ಮಂಡಾಡಿ ಹೋರ್ವರಮನೆಯ ಆದರ್ಶ ಶೆಟ್ಟಿ, ಸಂತೋಷ ಶೆಟ್ಟಿ, ಕರುಣಾಕರ ಕೊಠಾರಿ, ಜಯರಾಮ ಶೆಟ್ಟಿ, ಲಕ್ಷ್ಮಣ ಶೆಟ್ಟಿ ಭಾಗವಹಿಸಿದ್ದರು.
ಕೋಣಗಳ ತಂಡಕ್ಕೆ ಗೌರವಧನ ನೀಡಲಾಯಿತು. ಹಗಲಿರುಳು ನಡೆದ ಕಂಬಳೋತ್ಸವದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಆದರ್ಶ ಶೆಟ್ಟಿ ಮಂಡಾಡಿ ಹೋರ್ವರಮನೆ ಸ್ವಾಗತಿಸಿದರು. ಎನ್. ಮಂಜಯ್ಯ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಕಾಳಾವರ, ಅಭಿಜಿತ್ ಪಾಂಡೇಶ್ವರ ನಿರೂಪಿಸಿದರು. ಜಯರಾಮ ಶೆಟ್ಟಿ ಮಂಡಾಡಿ ಹೋರ್ವರಮನೆ ವಂದಿಸಿದರು. ‘ಕಾಂತಾರ’ ಖ್ಯಾತಿಯ ದೈವನರ್ತಕ ನಾಗರಾಜ ಪಾಣ ಅಂಪಾರು ಪಾಡ್ಡನಗಳನ್ನು ಹಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.