ADVERTISEMENT

ಕಂಚಿನಡ್ಕ ಟೋಲ್‌ಗೇಟ್: ಕಾಂಗ್ರೆಸ್‌ನಿಂದ ಪ್ರತಿಭಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 14:52 IST
Last Updated 19 ಆಗಸ್ಟ್ 2024, 14:52 IST

ಪಡುಬಿದ್ರಿ: ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರ ರದ್ದು ಮಾಡುವಂತೆ ಒತ್ತಾಯಿಸಿ ಕಂಚಿನಡ್ಕದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇದೇ 21ರಂದು ಸಾರ್ವಜನಿಕ ಪ್ರತಿಭಟನೆ ನಡೆಯಲಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ತಿಳಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಅಂದು ಬೆಳಿ‌ಗ್ಗೆ 9ಕ್ಕೆ ಕಂಚಿನಡ್ಕದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುವರು. 22ರಂದು ಯೋಜನೆ ರದ್ದುಪಡಿಸಲು ಒತ್ತಾಯಿಸಿ ಬೆಂಗಳೂರಿಗೆ ನಿಯೋಗ ತೆರಳಿ ಲೋಕೋಪಯೋಗಿ ಇಲಾಖೆ ಸಚಿವರಿಗೆ ಮನವಿ ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT