ADVERTISEMENT

ಹೆಬ್ರಿ: ಕನ್ನಡ ರಸಪ್ರಶ್ನೆ ಸ್ಪರ್ಧೆ, ಉಪನ್ಯಾಸ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 8 ಮೇ 2025, 11:30 IST
Last Updated 8 ಮೇ 2025, 11:30 IST
ಉದ್ಯಮಿ ಮುನಿಯಾಲು ಗೋಪಿನಾಥ ಭಟ್ ಮಾತನಾಡಿದರು
ಉದ್ಯಮಿ ಮುನಿಯಾಲು ಗೋಪಿನಾಥ ಭಟ್ ಮಾತನಾಡಿದರು   

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ‘ಕನ್ನಡ ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸ ಕಾರ್ಯಕ್ರಮ’ ಬುಧವಾರ ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಉದ್ಯಮಿ ಮುನಿಯಾಲು ಗೋಪಿನಾಥ ಭಟ್ ಮಾತನಾಡಿ, ‘ಕಸಾಪ ಹೆಬ್ರಿ ತಾಲ್ಲೂಕು ಘಟಕವು ಕನ್ನಡಕ್ಕಾಗಿ ಅನೇಕ ರೀತಿಯಲ್ಲಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಜ್ಞಾನ, ಆಸಕ್ತಿ ಹೆಚ್ಚಿಸಲು ಇಂತಹ ಕಾರ್ಯಕ್ರಮ ಅಗತ್ಯ’ ಎಂದರು.

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ ಮಾತನಾಡಿ, ‘ಕನ್ನಡ ಹೃದಯದ ಭಾಷೆಯಾಗಬೇಕು. ಅದನ್ನು ಎಂದೂ ಮರೆಯುವಂತಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಸ್ಪರ್ಧೆಯೂ ಇದೆ ಅವಕಾಶಗಳೂ ಇವೆ. ಗುರಿಯ ಕಡೆ ಏಕಾಗ್ರ ಚಿತ್ತವಾಗಿ ಸಾಗಿದರೆ ಯಶಸ್ಸು ಖಂಡಿತ’ ಎಂದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್‌ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಮುದ್ದೂರು ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ದಿನೇಶ ಪೈ ಉದ್ಘಾಟಿಸಿದರು.

ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಧಾಕರ ಕೆ.ಜಿ ಇದ್ದರು. ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ ಹೆಬ್ರಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಪ್ರವೀಣ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ಆರ್. ಭಟ್ ಸ್ವಾಗತಿಸಿದರು. ಮಹೇಶ ಹೈಕಾಡಿ ವಂದಿಸಿದರು. ಮಂಜುನಾಥ ಕೆ ಶಿವಪುರ ನಿರೂಪಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ಹೆಬ್ರಿ ತಾಲ್ಲೂಕು ಘಟಕದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ‘ಕನ್ನಡ ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸ ಕಾರ್ಯಕ್ರಮ’ ಬುಧವಾರ ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.