ADVERTISEMENT

ಉಡುಪಿ: ಬೀಚ್‌ ಸ್ವಚ್ಛಗೊಳಿಸಿ ಕನ್ನಡ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 13:50 IST
Last Updated 2 ನವೆಂಬರ್ 2022, 13:50 IST
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಲ್ಪೆ ಬೀಚ್‌ನಿಂದ ಸೀ-ವಾಕ್‌ವರೆಗಿನ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹಾಗೂ ಉಡುಪಿ ನಗರಸಭೆ ಸಹಕಾರದೊಂದಿಗೆ ನಡೆಯಿತು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಲ್ಪೆ ಬೀಚ್‌ನಿಂದ ಸೀ-ವಾಕ್‌ವರೆಗಿನ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹಾಗೂ ಉಡುಪಿ ನಗರಸಭೆ ಸಹಕಾರದೊಂದಿಗೆ ನಡೆಯಿತು.   

ಉಡುಪಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಲ್ಪೆ ಬೀಚ್‌ನಿಂದ ಸೀ-ವಾಕ್‌ವರೆಗಿನ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹಾಗೂ ಉಡುಪಿ ನಗರಸಭೆ ಸಹಕಾರದೊಂದಿಗೆ ನಡೆಯಿತು.

ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್ ಕಸ ತೆಗೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮಿತಿ ಅಧ್ಯಕ್ಷರಾದ ಪಾಂಡುರಂಗ ಮಲ್ಪೆ ಸ್ವಚ್ಛತಾ ಕಾರ್ಯಕ್ರಮದ ಉದ್ದೇಶ ವಿವರಿಸಿದರು. ನಗರಸಭಾ ಸದಸ್ಯ ವಿಜಯ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ಹನುಮಾನ್ ವಿಠೋಬ ಭಜನಾ ಮಂದಿರ, ಬಾಲಕರ ಶ್ರೀ ರಾಮ ಭಜನಾ ಮಂದಿರ. ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ, ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ, ಭಕ್ತಿ ಉದಯ ಶ್ರೀ ಪಂಡರಿನಾಥ ಭಜನಾ ಮಂದಿರ ವಡಭಾಂಡೇಶ್ವರ ಮಾತೃ ಮಂಡಳಿಯ ಸದಸ್ಯರು, ಮಲ್ಪೆ ಬೀಚ್‌ ಗುತ್ತಿಗೆದಾರರಾದ, ಮಂತ್ರ ಟೂರಿಸಂ ಮುಖ್ಯಸ್ಥ ಸುದೇಶ್ ಶೆಟ್ಟಿ, ಮಲ್ಪೆ ಬೀಚ್ ಪ್ರವಾಸಿ ಬೋಟ್ ಮಾಲೀಕರು, ಅಂಗಡಿ ವ್ಯಾಪಾರಸ್ಥರು, ಬೀಚ್ ವ್ಯಾಪಾರಿಗಳು ಭಾಗವಹಿಸಿದ್ದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.