ಉಡುಪಿ: ನ.25 ಹಾಗೂ 26ರಂದು ಉಡುಪಿಯ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಳದ ಭವಾನಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಎನ್.ತಿರುಮಲೇಶ್ವರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಪಿ.ರವಿರಾಜ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರ ಆಯ್ಕೆ ನಡೆಯಿತು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ತಾಲ್ಲೂಕು ಗೌರವ ಕಾರ್ಯದರ್ಶಿ ಜನಾರ್ಧನ ಕೊಡವೂರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.