ADVERTISEMENT

ಉಡುಪಿ | ಕುಲವೆನ್ನದೆ ಮನುಕುಲದ ನಾಡು ಕಟ್ಟೋಣ: ಮಹೇಶ್ ಜೋಶಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 7:24 IST
Last Updated 30 ಏಪ್ರಿಲ್ 2025, 7:24 IST
   

ಉಡುಪಿ: ಕುಲವೆನ್ನದೆ ಮನುಕುಲದ ನಾಡನ್ನು ಕಟ್ಟುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸುಕೃತಿ - 2025ರಲ್ಲಿ ಅವರು ಮಾತನಾಡಿದರು.

ಕುಲ ಕುಲವೆಂದು ಹೊಡೆದಾಡದಿರಿ ಎಂದು ಹೇಳಿರುವ ಕನಕದಾಸರು ಭಕ್ತಿ ಮೆರೆದ ಸ್ಥಳವಾದ ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿರುವುದು ಮನುಕುಲ ಎಂಬುದನ್ನು ತೋರಿಸಿಕೊಡಲಾಗಿದೆ ಎಂದರು.

ADVERTISEMENT

ಸಮ್ಮೇಳನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಮಾತನಾಡಿ, ಆತ್ಮ ವಿಕಾಸಕ್ಕೆ ಸಾಹಿತ್ಯ ಚಿಂತನೆ ಅತ್ಯಗತ್ಯ ಎಂದು ಹೇಳಿದರು.

ಸಮ್ಮೇಳನಾಧ್ಯಕ್ಷ ಪಾದೆಕಲ್ಲು ವಿಷ್ಣು ಭಟ್ ಮಾತನಾಡಿ, ನಾವೇ ನಮ್ಮತನವನ್ನು ಬಿಟ್ಟಿದ್ದೇವೆ. ನಮ್ಮ ಭಾಷೆಯನ್ನು ಬಳಸುವ ಮನಸ್ಸು ನಮ್ಮಲ್ಲಿ ಇಲ್ಲವಾಗಿದೆ ಎಂದರು.

ಯುವ ಜನರಲ್ಲಿ ಸಾಹಿತ್ಯದ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ನಾವು ಏನು ಮಾಡಿದ್ದೇವೆ ಎಂಬುದರ ಬಗ್ಗೆ ಚಿಂತನೆ ನಡೆಸುವ ಅಗತ್ಯ ಇದೆ ಎಂದು ಪ್ರತಿವಾದಿಸಿದರು.

ಕ.ಸಾ.ಪ. ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.