ADVERTISEMENT

ಕಾಪು: ಪರಾರಿಯಾಗಲು ಯತ್ನಿಸಿದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 7:49 IST
Last Updated 1 ಜನವರಿ 2026, 7:49 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಕಾಪು (ಪಡುಬಿದ್ರಿ): ಕಳ್ಳತನ ಪ್ರಕರಣದ ಆರೋಪಿಯ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಆರೋಪಿಯು ತನ್ನ ಕೈಗೆ ಚಾಕುವಿನಿಂದ ಇರಿದುಕೊಂಡು ಪರಾರಿಯಾಗಲು ಯತ್ನಿಸಿದ್ದು, ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಉಮೇಶ್ ಬಳೆಗಾರ ಬಂಧಿತ ಆರೋಪಿ. ಉಳಿಯಾರಗೋಳಿ ಗ್ರಾಮದ ಕೋತಲ್ ಕಟ್ಟೆ ಎಂಬಲ್ಲಿ ಈತ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದಾಗ  ಓಡಲು ಪ್ರಾರಂಭಿಸಿದ್ದಾನೆ. ಆತನನ್ನು ಬೆನ್ನಟ್ಟಿದಾಗ ಚಾಕುವಿನಿಂದ ತನ್ನ ಎಡಕೈ ಮಣಿಗಂಟಿನ ಬಳಿ ಕೊಯ್ದುಕೊಂಡನು. ಈ ವೇಳೆ ಆತನನ್ನು ಹಿಡಿದುಕೊಂಡು ಕೈಯಿಂದ ಚಾಕುವನ್ನು ಕಿತ್ತುಕೊಂಡು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.