
ಕಾಪು (ಪಡುಬಿದ್ರಿ): ಮಜೂರು ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡದ ಕಾಮಗಾರಿಯ ಶಂಕುಸ್ಥಾಪನೆ, ರಸ್ತೆ ಕಾಂಕ್ರೀಟ್ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರೆವೇರಿಸಿದರು.
ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಸ್ತಾವನೆ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸರ್ಕಾರದ ಪಿ.ಎಂ. ಅಭೀಮ್ ಯೋಜನೆಯಡಿ 92 ಹೇರೂರು ಗ್ರಾಮದ ಕಲ್ಲುಗುಡ್ಡೆಯಲ್ಲಿ ಗಣೇಶ ಭೋಜ ಕರ್ಕೇರ ಅವರು ಸ್ಥಳದಾನ ಮಾಡಿರುವ ಜಾಗದಲ್ಲಿ ₹65 ಲಕ್ಷ ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣವಾಗಲಿದೆ.
₹20 ಲಕ್ಷ ವೆಚ್ಚದಲ್ಲಿ ಹೇರೂರು ಗ್ರಾಮದ ಕಲ್ಲುಗುಡ್ಡೆ ಗರಡಿಯಿಂದ ಕರಂದಾಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಗುದ್ದಲಿ ಪೂಜೆ ನೆರೆವೇರಿಸಿದರು.
ಸ್ಥಳದಾನಿ ಗಣೇಶ್ ಭೋಜ ಕರ್ಕೇರ, ಸುಂದರಿ ಪೂಜಾರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಸದಸ್ಯರಾದ ಸಹನಾ ತಂತ್ರಿ, ಸಂದೀಪ್, ಮಧುಸೂಧನ್, ವನಿತಾ, ಭಾಸ್ಕರ, ಜೀತೇಶ್ ಶೆಟ್ಟಿ, ವಿಜಯ್ ಧೀರಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ತಾಲ್ಲೂಕು ವೈಧ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಕಾಪು ಆಡಳಿತ ವೈದ್ಯಾಧಿಕಾರಿ ಡಾ.ಬಿಂದು ಭಟ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲಾ ಮೆಂಡನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋದಾ, ಸಮುದಾಯ ಆರೋಗ್ಯ ಅಧಿಕಾರಿ ಡಯಾನ ಪ್ರಿಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.