ಕಾಪು (ಪಡುಬಿದ್ರಿ): ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಹಿಂದೆ ಗುರುಕುಲ ಶಿಕ್ಷಣ ಪದ್ದತಿ ಇತ್ತು. ಆಗ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಪ್ರಯತ್ನ ನಡೆಯುತ್ತಿತ್ತು. ಶಾಲೆಯು ಕಲಿಕೆಯ ದೇವಾಲಯವಾಗಿದ್ದು, ಪ್ರತಿ ಮಗುವು ಭಿನ್ನ ಆ ಮಗುವಿನ ಕಲಿಕೆಯು ಭಿನ್ನ ಎಂದರು.
ಕಾಲೇಜು ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ದೀಪಿಕಾ ಸುವರ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಪುರಸಭೆ ಸದಸ್ಯ ನಾಗೇಶ್, ನರೇಂದ್ರ ರೈ, ರಾಘವೇಂದ್ರ ನಾಯಕ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಚೇತ್ ಸನಿಲ್, ಉಪಾಧ್ಯಕ್ಷರಾದ ಮನೀಷ, ಪ್ರತೀಕ್ಷಾ, ಕಾರ್ಯದರ್ಶಿ ವಿಜಯ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ರಿಷಿಕಾ ಸುವರ್ಣ, ಜಂಟಿ ಕಾರ್ಯದರ್ಶಿ ಭುವನೇಶ್ ಆಚಾರ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.