ADVERTISEMENT

ಕಾಪು ಹೊಸ ಮಾರಿಗುಡಿ: ಫೆ. 4ಕ್ಕೆ ನವದುರ್ಗಾ ಲೇಖನ ಯಜ್ಞ, ನವಚಂಡಿಯಾಗ

ಕಾಪು ಶ್ರೀಹೊಸ ಮಾರಿಗುಡಿ: ಕಲ್ಲೋಕ್ತ ಪೂಜೆ, ವಾಗೀಶ್ವರಿ ಪೂಜೆ, ಮಹಾಪ್ರಸಾದ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2025, 12:40 IST
Last Updated 29 ಜನವರಿ 2025, 12:40 IST
   

ಕಾಪು (ಪಡುಬಿದ್ರಿ): ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಾನ್ನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ ಫೆ. 4ರಂದು ನವದುರ್ಗಾ ಲೇಖನ ಯಜ್ಞ, ನವಚಂಡಿಯಾಗ ನಡೆಯಲಿದೆ.

ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ರಘುಪತಿ ಭಟ್, ‘ಫೆ. 4ರಂದು ಬೆಳಿಗ್ಗೆ ನವಚಂಡಿಯಾಗ ಆರಂಭ, ಕಲ್ಲೋಕ್ತ ಪೂಜಾ, 11ಗಂಟೆಗೆ ಪೂರ್ಣಾಹುತಿ, ಧಾರ್ಮಿಕ ಸಭಾ ಕಾರ್ಯಕ್ರಮ, ವಾಗೀಶ್ವರಿ ಪೂಜೆ, ಮಹಾಮಂಗಳಾರತಿ, ಮಹಾಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 1ರಿಂದ ಅನ್ನಪ್ರಸಾದ ವಿತರಣೆ’ ಜರುಗಲಿದೆ.

ದೇವಸ್ಥಾನದ ಪ್ರಧಾನ ತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವಚಂಡಿಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಲಿವೆ.

ADVERTISEMENT

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ನೇತೃತ್ವದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಮತ್ತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಉಪಸ್ಥಿತಿಯಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿವೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರ್ಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಪಾಲ್ಗೊಳ್ಳುವರು.

ಶಾಸಕ ಡಾ.ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ ವೆಂಕಟೇಶ್ ಗೌರವ ಉಪಸ್ಥಿತರಾಗಿ ಭಾಗವಹಿಸುವರು.

ಪತ್ರಿಕಾಗೋಷ್ಠಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಸಂಚಾಲಕ ಸುವರ್ಧನ್ ನಾಯಕ್, ಮಹಿಳಾ ಪ್ರಧಾನ ಸಂಚಾಲಕಿ ಗೀತಾಂಜಲಿ ಎಂ ಸುವರ್ಣ, ಸಂಚಾಲಕಿ ಸಾವಿತ್ರಿ ಗಣೇಶ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.