ಬ್ರಹ್ಮಾವರ: ಸಾಲಿಗ್ರಾಮ ಕಾರ್ಕಡದ ಗೆಳೆಯರ ಬಳಗದ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ನೀಡುವ ಗೆಳೆಯರ ಬಳಗ ಕಾರಂತ ಪುರಸ್ಕಾರ ಪ್ರಶಸ್ತಿಗೆ ಸಾಹಿತಿ ಎಚ್. ಶಕುಂತಳಾ ಭಟ್ ಆಯ್ಕೆಯಾಗಿದ್ದಾರೆ.
ಕಾರಂತರ ಒಡನಾಡಿಯಾಗಿ ಸಮಾಜ ಸೇವೆ, ಲೇಖಕಿಯಾಗಿ, ಸಂಘಟಕಿ, ಕವಿ, ಸಾಂಸ್ಕೃತಿಕ ಕಥೆಗಾರರಾಗಿ ಅವರು ಗುರುತಿಸಿಕೊಂಡಿದ್ದಾರೆ. 90 ಕೃತಿಗಳನ್ನು ರಚಿಸಿದ್ದಾರೆ. ಕನ್ನಡ, ತುಳು ಭಾಷೆ, ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪುರಸ್ಕಾರವು ಗೌರವಧನ, ಸನ್ಮಾನಪತ್ರ ಒಳಗೊಂಡಿದೆ. ಅ. 17ರಂದು ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.