ಕಾರ್ಕಳ: ತಾಲ್ಲೂಕಿನ ಇರ್ವತ್ತೂರು ಗ್ರಾಮ ಪಂಚಾಯಿತಿಯ ಆರು ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆ ದೀಪಾ ಶ್ರೀನಾಥ್, ಸದಸ್ಯರಾದ ಶೇಖರ್ ಅಂಚನ್, ಬಾಲಕೃಷ್ಣ ಶೆಟ್ಟಿ, ಕವಿತಾ ಶಂಕರ್, ಅನಿತಾ ಕುಲಾಲ್ ಹಾಗೂ ಲಲಿತಾ ನಾಯ್ಕ ರಾಜಿನಾಮೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ನಿರ್ಧಾರದ ವಿರುದ್ಧ ಸ್ಪರ್ಧಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಉದಯ ಎಸ್. ಕೋಟ್ಯಾನ್ ಅವರನ್ನು ಬಿಜೆಪಿಯಿಂದ ಜಿಲ್ಲಾಧ್ಯಕ್ಷರು ವಜಾಗೊಳಿಸಿದ್ದಕ್ಕೆ ಅಸಮಧಾನಗೊಂಡ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.