ADVERTISEMENT

ಕಜೆ ಜಯ, ಬಿಳಿಬೆಂಡೆ ಬ್ರಾಂಡ್ ಬೆಳೆಯಾಗಿ ಅಭಿವೃದ್ಧಿ

ರೈತ, ವಿಜ್ಞಾನಿ, ಅಧಿಕಾರಿಗಳ ಸಮಾಲೋಚನಾ ಸಭೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 11:42 IST
Last Updated 28 ಜುಲೈ 2020, 11:42 IST
ಕಾರ್ಕಳದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿಕ ಸಮಾಜ, ಭಾರತೀಯ ಕಿಸಾನ್ ಸಂಘ ಹಾಗೂ ರೋಟರಿ ಕ್ಲಬ್ ಇವುಗಳ ಆಶ್ರಯದಲ್ಲಿ ಆಯೋಜಿಸಿದ ರೈತ, ವಿಜ್ಞಾನಿ, ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿದರು
ಕಾರ್ಕಳದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿಕ ಸಮಾಜ, ಭಾರತೀಯ ಕಿಸಾನ್ ಸಂಘ ಹಾಗೂ ರೋಟರಿ ಕ್ಲಬ್ ಇವುಗಳ ಆಶ್ರಯದಲ್ಲಿ ಆಯೋಜಿಸಿದ ರೈತ, ವಿಜ್ಞಾನಿ, ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿದರು   

ಕಾರ್ಕಳ: ‘ಕೃಷಿ ವಲಯ ಬಿಟ್ಟು ಹೋಗುವುದು ಆಧುನಿಕತೆಯಲ್ಲ. ಕೃಷಿ ಕ್ಷೇತ್ರದಲ್ಲಿ ನವ ಪ್ರಯೋಗ, ಚಿಂತನೆಗಳು ನಡೆಯಬೇಕು’ ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿಕ ಸಮಾಜ, ಭಾರತೀಯ ಕಿಸಾನ್ ಸಂಘ ಹಾಗೂ ರೋಟರಿ ಕ್ಲಬ್ ಇವುಗಳ ಆಶ್ರಯದಲ್ಲಿ ಆಯೋಜಿಸಿದ್ದ ರೈತ, ವಿಜ್ಞಾನಿ, ಅಧಿಕಾರಿಗಳ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ರೈತರು, ಮುಖಂಡರು ಸಲಹೆ ಸೂಚನೆಗಳನ್ನು ನೀಡಿದರು. ‘ಕಜೆ ಜಯ’ ಹಾಗೂ ‘ಬಿಳಿ ಬೆಂಡೆ’ ತಳಿಗಳನ್ನು ಕಾರ್ಕಳದ ಬ್ರಾಂಡ್ ಬೆಳೆಗಳಾಗಿ ಅಭಿವೃದ್ಧಿ ಪಡಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಉದಯ್ ಕೋಟ್ಯಾನ್, ದಿವ್ಯಶ್ರೀ ಅಮೀನ್, ರೇಷ್ಮಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಹರೀಶ ನಾಯ್ಕ, ರೋಟರಿ ಅಧ್ಯಕ್ಷೆ ರೇಖಾ ಉಪಾಧ್ಯಾಯ, ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿ ಹಾಗೂ ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳಾದ ಡಾ.ಎಸ್.ಯು. ಪಾಟಿಲ್, ಡಾ.ಧನಂಜಯ, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಹಾಗೂ ತೋಟಗಾರಿಕೆ ಉಪನಿರ್ದೇಶಕಿ ಭುವನೇಶ್ವರಿ ಇದ್ದರು. ಕೃಷಿ ನಿರ್ದೇಶಕ ಜೈರಾಜ್ ಪ್ರಕಾಶ್ ಸ್ವಾಗತಿಸಿದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಬಿ.ವಿ. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.