ಕಾರ್ಕಳ: ಇಲ್ಲಿನ ಬಾಹುಬಲಿ ಪ್ರವಚನ ಮಂದಿರದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಹಿರಿಯಂಗಡಿಯ ಎಸ್.ಎನ್.ವಿ ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಎಸ್.ಎನ್.ವಿ ಶಿಕ್ಷಣ ಸಂಸ್ಥೆಗಳ ಸಂಚಾಲಕ, ವಕೀಲ ಎಂ.ಕೆ. ವಿಜಯ ಕುಮಾರ್ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದರು. ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಧನ್ಯಾ, ತ್ರಿಶಾ ಆರ್. ಶೆಟ್ಟಿ, ಸಾನಿಧ್ಯ ಆರ್. ಜೈನ್, ಶಾಶ್ವತಿ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. ಪ್ರೌಢಶಾಲಾ ಮುಖ್ಯಶಿಕ್ಷಕಿ ಉಷಾ ಪಡಿವಾಳ್, ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಶರ್ಮಿಳಾ ಹೆಗ್ಡೆ ಭಾಗವಹಿಸಿದ್ದರು. ಇಂಗ್ಲಿಷ್ ಉಪನ್ಯಾಸಕ ಅನಿಲ್ ಕುಮಾರ್ ಸಾಧಕರನ್ನು ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕ ವೀರೇಂದ್ರ ಜೈನ್ ವಂದಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಸುಪ್ರೀತಾ ಜೈನ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.