ADVERTISEMENT

ಉಗ್ರರ ಹೇಯ ಕೃತ್ಯ: ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಖಂಡನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 13:54 IST
Last Updated 23 ಏಪ್ರಿಲ್ 2025, 13:54 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ಕಾರ್ಕಳ: ಪ್ರವಾಸಿಗರ ಮೇಲೆ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹೇಯ ಕೃತ್ಯ. ಇದನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಳಿಯಲ್ಲಿ ಮಡಿದ ರಾಜ್ಯದ ಇಬ್ಬರು ಸೇರಿ ಅಮಾಯಕರಿಗೆ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಸುತ್ತದೆ. ಉಗ್ರರ ದಮನಕ್ಕೆ ಕೇಂದ್ರ ಸರ್ಕಾರ ತಕ್ಷಣ‌ ಕಾರ್ಯ ಪ್ರವೃತ್ತವಾಗಬೇಕು. ಸರ್ಕಾರ ತೆಗೆದುಕೊಳ್ಳುವ ಕಾನೂನಾತ್ಮಕ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ADVERTISEMENT

ಗಡಿಯಲ್ಲಿ ಉಗ್ರರ ದಾಳಿಯನ್ನು ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದು ಗೃಹ ಇಲಾಖೆಯ ಗಂಭೀರ ವೈಫಲ್ಯವನ್ನು ತೋರಿಸುತ್ತದೆ.‌ 2 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಒಂದೇ ಕಡೆ ಸೇರಿದ್ದರೂ ಒಬ್ಬನೇ ಒಬ್ಬ ಭದ್ರತಾ ಸಿಬಂದಿ ಇಲ್ಲದಿರುವುದು ಭದ್ರತಾ ಲೋಪ ಎಂದು ಅವರು ದೂರಿದ್ದಾರೆ.

ಸುರಕ್ಷತಾ ಲೋಪಗಳಿಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಉತ್ತರಿಸಬೇಕು. ಪ್ರಧಾನಿಯವರ ‘56’ ಇಂಚಿನ ಎದೆಯ ಶಕ್ತಿ ಏನೆಂಬುದು ದೇಶಕ್ಕೆ ತೋರಿಸುವ ಕಾಲ ಬಂದಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.