ADVERTISEMENT

ಕಾಂಗ್ರೆಸ್‌ನಿಂದ ಆರೋಗ್ಯ ತಪಾಸಣೆ ಶಿಬಿರ

‘ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದ ಬಹಳ ಮುಖ್ಯ’

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 7:33 IST
Last Updated 14 ಡಿಸೆಂಬರ್ 2025, 7:33 IST
ಕಾರ್ಕಳ ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವತಿಯಿಂದ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು
ಕಾರ್ಕಳ ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವತಿಯಿಂದ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು   

ಕಾರ್ಕಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಪ್ ಫರ್ಟಿಲಿಟಿ ಮಂಗಳೂರು ಆಶ್ರಯದಲ್ಲಿ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು.

ಆಳ್ವಾಸ್ ಸಂಸ್ಥೆಯ ತಜ್ಞ ವೈದ್ಯೆ ಡಾ.ಹನಾ ಶೆಟ್ಟಿ ಶಿಬಿರ ಉದ್ಘಾಟಿಸಿ, ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಒತ್ತಡದ ಜೀವನ ಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯ. ಈ ನಿಟ್ಟನಿನಲ್ಲಿ ಇಂತಹ ಆರೋಗ್ಯ ಶಿಬಿರಗಳು ಸಹಕಾರಿ ಎಂದರು.

ADVERTISEMENT

ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಬಡಜನರು, ಮಹಿಳೆಯರ ಪರವಾದ ಅವರ ಕಾಳಜಿಯನ್ನು ಮರೆಯಲು ಸಾಧ್ಯವಿಲ್ಲ. ಅವರ ಹೆಸರಿನಲ್ಲಿ ನಡೆಯುತ್ತಿರುವ ಆರೋಗ್ಯ ಶಿಬಿರ ಅರ್ಥಪೂರ್ಣವಾಗಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಭಾಸ್ಕರ ಪೂಜಾರಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಶುಭದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. 

ಶಿಬಿರದಲ್ಲಿ 200ಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಹಾಯಾರ್ಥ ಸಹಾಯಧನ ವಿತರಿಸಲಾಯಿತು. ಗ್ರಾಮೀಣ ಸಮಿತಿಯ ಮಹಿಳಾ ಅಧ್ಯಕ್ಷರನ್ನು ಅಭಿನಂದಿಸಲಾಯಿತು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ.ಶವೀಝ್ ಪೈಝಿ, ಪ್ರಸಾದ್ ನೇತ್ರಾಲಯದ ಡಾ.ಕ್ರೀನಾ, ಮಾಲಿನಿ ರೈ, ಕಾಂಗ್ರೆಸ್ ಎಸ್‌ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ ಭಾಗವಹಿಸಿದ್ದರು. ಪುರಸಭೆ ಸದಸ್ಯೆ ನಳಿನಿ ಆಚಾರ್ಯ ನಿರೂಪಿಸಿದರು. ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ ವಂದಿಸಿದರು.