
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಕಾರ್ಕಳ: ಇಲ್ಲಿನ ಅನಂತಶಯನದ ಮುಖ್ಯ ರಸ್ತೆಯಲ್ಲಿ ಕಾರ್ಕಳ ಬಸ್ ನಿಲ್ದಾಣದತ್ತ ಬರುತ್ತಿದ್ದ ಬಸ್ ಚಾಲಕನಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಿಕ್ಷಾಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ.
ರಸ್ತೆ ಬದಿ ರಿಕ್ಷಾ ನಿಲ್ಲಿಸಿಕೊಂಡು ಚಾಲಕ ಒಳಗೆ ಕುಳಿತಿದ್ದ ವೇಳೆ ಏಕಾಏಕಿ ಬಸ್ ಮುನ್ನುಗ್ಗಿ ಬಂದು ಡಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕನ ತಲೆ, ಕೈ ಕಾಲಿಗೆ ಗಾಯವಾಗಿದೆ. ರಸ್ತೆಯಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಹಾಗೂ ರಿಕ್ಷಾ ಚಾಲಕರನ್ನು ಸ್ಥಳದಲ್ಲಿದ್ದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂ ವಾಹನಗಳು ಜಖಂಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.