ಸಾವು–ಸಾಂದರ್ಭಿಕ ಚಿತ್ರ
ಕಾರ್ಕಳ: ತಾಲ್ಲೂಕಿನ ನಂದಳಿಕೆ ಗ್ರಾಮದಲ್ಲಿ ಅತಿವೇಗದ ಪರಿಣಾಮ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಮರಿಯ ಫೆರ್ನಾಂಡೀಸ್ (60) ಮೃತಪಟ್ಟವರು. ಗ್ರಾಮದ ಮಾವಿನಕಟ್ಟೆ ಎಂಬಲ್ಲಿನ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಅಜಾಗರೂಕತೆಯಿಂದ ರಸ್ತೆಯ ಬಲಭಾಗದಲ್ಲಿ ಚಲಾಯಿಸಿಕೊಂಡು, ಬೆಳ್ಮಣ್‌ನಿಂದ ಕಾರ್ಕಳದತ್ತ ತೆರಳುತ್ತಿದ್ದ ಕಾರಿನ ಬಲಬದಿ ಡೋರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಘಟನೆ ಸಂಭವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.