ಇಸ್ರೊ ವಿಜ್ಞಾನಿ ಕಿರಣ್ ಕುಮಾರ್
ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿಗೆ ಆ. 15ರಂದು ಬಾಹ್ಯಾಕಾಶ ವಿಜ್ಞಾನಿ, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವರು.
ಅವರು ಬೆಳಿಗ್ಗೆ 11ಕ್ಕೆ ‘ಫ್ರಂ ಕ್ಲಾಸ್ ರೂಂ ಟು ಕಾಸ್ಮೋಸ್ ಸೈನ್ಸ್, ಯೂತ್ ಅಂಡ್ ನೇಷನ್’ ವಿಚಾರದ ಕುರಿತು ವಿದ್ಯಾರ್ಥಿಗಳಿಗೆ ಬಿಸಿಎಫ್ ಇನ್ಸ್ಪೀರೊ ಎಂಬ ಶೀರ್ಷಿಕೆಯಲ್ಲಿ ಸ್ಫೂರ್ತಿ ಮಾತು ಕಾರ್ಯಕ್ರಮ ನಡೆಯಲಿದೆ. ನಂತರ ಜೀ ಸರಿಗಮಪ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ ಎಂ.ಜಿ, ತಂಡದಿಂದ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.