ADVERTISEMENT

‘ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ 1837’ ನಾಟಕ ಪ್ರದರ್ಶನ 12ರಿಂದ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 5:20 IST
Last Updated 9 ಆಗಸ್ಟ್ 2022, 5:20 IST

ಕಾರ್ಕಳ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.12 ರಿಂದ ಕಾರ್ಕಳ ಯಕ್ಷ ರಂಗಾಯಣದ ರಂಗ ಪಯಣ ಆರಂಭಿಸುತ್ತಿದ್ದು 15ರ ತನಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ- 1837’ ನಾಟಕದ ಪ್ರದರ್ಶನ ನಡೆಸಲಿದೆ.

12ರಂದು ಸಂಜೆ 6ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದ್ರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಆಳ್ವಾಸ್ ಕಾಲೇಜು ಇವುಗಳ ಸಹಯೋಗದಲ್ಲಿ ಮೂಡಬಿದಿರೆ ವಿದ್ಯಾಗಿರಿಯ ಶಿವರಾಮ ಕಾರಂತ ಸಭಾಭವನದಲ್ಲಿ ಪ್ರದರ್ಶನ ನಡೆಯಲಿದೆ.

13ರಂದು ಸಂಜೆ 6ಕ್ಕೆ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ, 14ರಂದು ಸಂಜೆ 5.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಮಂಗಳೂರಿನ ಪುರಭವನದಲ್ಲಿ, 15ರಂದು ಸಂಜೆ 5.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಾಟಕ ಪ್ರದರ್ಶನಗಳು ನಡೆಯಲಿವೆ.

ADVERTISEMENT

ಸಾಹಿತಿ ಡಾ. ಪ್ರಭಾಕರ ಶಿಶಿಲ ರಚಿತ ‘ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ’ ನಾಟಕವನ್ನು ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದು ನೀನಾಸಂನ ಆರು ಮಂದಿ ಕಲಾವಿದರು ಹಾಗೂ ಹವ್ಯಾಸಿ ಕಲಾವಿದರು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ರಂಗ ಪ್ರಯೋಗ ನಡೆಸುತ್ತಿದ್ದಾರೆ. ನಾಟಕವನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ವೀಕ್ಷಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ, ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಹಾಗೂ ಯಕ್ಷ ರಂಗಾಯಣದ ನಿರ್ದೇಶಕ ಜೀವನ್ ರಾಂ ಸುಳ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.