ಎಫ್‌ಐಆರ್
ಕಾರ್ಕಳ: ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ನಿಟ್ಟೆ ಸುದೀಪ್ ಶೆಟ್ಟಿ ಎಂಬುವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಠಾಣೆಯ ಎಎಸ್ಐ ಸುಂದರ ಅವರು, ಸಾಮಾಜಿಕ ಜಾಲತಾಣ ಪರಿಶೀಲನೆ ವೇಳೆ ಈ ಪೋಸ್ಟ್ ಗಮನಕ್ಕೆ ಬಂದಿದೆ.
‘ಆರೋಪಿ ನಿಟ್ಟೆ ಸುದೀಪ್ ಶೆಟ್ಟಿ, ರಾಜ್ಯ ಸರ್ಕಾರವು ಬೂಕರ್ ಪ್ರಶಸ್ತಿ ಪುರಸ್ಕೃತ ಭಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡುವಂತೆ ಘೋಷಿಸಿದ್ದನ್ನು ಉಲ್ಲೇಖಿಸಿ, ‘ದಸರಾ ಅನ್ನೋದು ಹಿಂದೂಗಳ ಸಾಂಸ್ಕೃತಿಕ ಹಬ್ಬ. ಅಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಿಂದೂ ಸಂಪ್ರದಾಯದಂತೆ ನಡೆಯುತ್ತವೆ. ಸನಾತನ ಹಿಂದೂ ಸಂಸ್ಕೃತಿ ಒಪ್ಪದ, ಆಚರಣೆ ಮಾಡದ ಈಕೆಯಿಂದ ದಸರಾ ಉದ್ಘಾಟನೆ ಮಾಡುವ ದರ್ದು ಏನಿದೆ. ಹಿಂದೂ ವಿರೋಧಿ ಕಾಂಗ್ರೆಸ್, ಹಿಂದೂಗಳ ಭಾವನೆಗೆ ಧಕ್ಕೆ ತರುವ ಪ್ರತಿ ವಿಚಾರದಲ್ಲೂ ಮುಂದಿರುತ್ತದೆ’ ಎಂದು ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.