
ಪ್ರಜಾವಾಣಿ ವಾರ್ತೆ
ಕಾರ್ಕಳ: ಭಾರತದ 49ನೇ ಜೂನಿಯರ್ ಬಾಲಕಿಯರ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವ ತಂಡಕ್ಕೆ ಕಾರ್ಕಳದ ವಿದ್ಯಾರ್ಥಿನಿ ವರುಣ ಶೆಟ್ಟಿ ಆಯ್ಕೆಯಾಗಿದ್ದಾರೆ.
ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಬೆಂಗಳೂರಿನಲ್ಲಿ ಈಚೆಗೆ ಆಯ್ಕೆ ಶಿಬಿರ ನಡೆಸಿತ್ತು. ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿವಿದ್ಯಾರ್ಥಿನಿಯಾದ ಈಕೆ ಡಿ.16 ರಿಂದ 21ರ ತನಕ ರಾಜಸ್ಥಾನದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಜೋಡುರಸ್ತೆಯ ಕೊರಚೊಟ್ಟುವಿನ ಶೋಭಾ ಮತ್ತು ಪ್ರಭಾಕರ ಶೆಟ್ಟಿ ದಂಪತಿ ಪುತ್ರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.