
ಕಾರ್ಕಳ: ಇಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಈಚೆಗೆ ‘ಎಕೋಸ್ ಆಫ್ ಇಂಗ್ಲಿಷ್’ ಮಾದರಿ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಉಪ ಪ್ರಾಂಶುಪಾಲೆ ವಾಣಿ ಕೆ. ನಿರ್ದೇಶನದಲ್ಲಿ, ವಿದ್ಯಾರ್ಥಿಗಳು ಇಂಗ್ಲಿಷ್ ಶಿಕ್ಷಕಿ ದರ್ಶಿನಿ ಮಾರ್ಗದರ್ಶನದಲ್ಲಿ ವಿವಿಧ ಲೇಖಕರ ಪರಿಚಯ, ಪುಸ್ತಕ ಪರಿಚಯ, ವ್ಯಾಕರಣ ಮಾದರಿಗಳ ಪ್ರದರ್ಶನ, ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ಬುಕ್ ಮಾರ್ಕ್ಸ್, ವ್ಯಾಕರಣ ಕ್ರಾಫ್ಟ್‌ಗಳ ಪ್ರದರ್ಶನ ನಡೆಯಿತು. ಭಾಷಾ ಕಲಿಕೆಯನ್ನು ಮನರಂಜನಾ ಆಟಗಳ ಮೂಲಕ ವಿದ್ಯಾರ್ಥಿಗಳು ಪ್ರಸ್ತುತಿಪಡಿಸಿದರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯನಿರ್ವಹಣಾ ಅಧಿಕಾರಿ ದಿನೇಶ್ ಎಂ. ಕೊಡವೂರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.