
ಪ್ರಜಾವಾಣಿ ವಾರ್ತೆಕಾರ್ಕಳ: ತಾಲ್ಲೂಕಿನ ಕುಕ್ಕಂದೂರು ಗ್ರಾಮದಲ್ಲಿ ಜಾನುವಾರುಗಳನ್ನು ಕಳವು ಮಾಡಿ ಕಸಾಯಿಖಾನೆಗೆ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದವವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾರ್ಜೆಡ್ಡು ಶ್ರೀದೇವಿ ಕೃಪಾ ಹಾಲ್‌ನ ಎದುರುಗಡೆ ರಸ್ತೆ ಬದಿ ನಿಂತ ಗೂಡ್ಸ್ ವಾಹನವೊಂದರ ಹಿಂದುಗಡೆಯಿಂದ ನೀರು ಇಳಿಯುತ್ತಿತತ್ತು. ಇದನ್ನು ನೋಡಿ ಅನುಮಾನಗೊಂಡ ನಗರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಲೋಕೇಶ್ ಅವರು ವಾಹನವನ್ನು ಪರಿಶೀಲಿಸಿದಾಗ ಅದರೊಳಗೆ 2 ದನಗಳನ್ನು ಹಗ್ಗದಿಂದ ಹಿಂಸಾತ್ಮಕ ರೀತಿಯಲ್ಲಿ ಕಟ್ಟಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.