ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಶುಕ್ರವಾರ ಕೋವಿಡ್ ದೃಢಪಟ್ಟಿದೆ. ಸೋಂಕು ತಗುಲಿರುವ ವಿಚಾರವನ್ನು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
‘ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯದ ಬಗ್ಗೆ ನಿಗಾವಹಿಸಿಕೊಂಡು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.