ADVERTISEMENT

ಕಾರ್ಕಳ: ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 6:20 IST
Last Updated 26 ಆಗಸ್ಟ್ 2025, 6:20 IST
   

ಕಾರ್ಕಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ಮಂಗಳವಾರ ನಸುಕಿನ ವೇಳೆ

ವ್ಯಕ್ತಿಯೊಬ್ಬರನ್ನು ಇರಿದು ಕೊಲೆ ಮಾಡಲಾಗಿದೆ.

ನವೀನ ಪೂಜಾರಿ (50) ಕೊಲೆಯಾದವರು. ಮಂಗಳೂರಿನ ಪಡೀಲ್ ನಿವಾಸಿಯಾದ ಇವರು ಈ ಹಿಂದೆ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬಳಿಕ ಹಣಕಾಸಿನ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಇವರು ಕುಂಟಲ್ಪಾಡಿ ಬಳಿಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು.

ADVERTISEMENT

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್‌ಪಿ ಹರ್ಷ ಪ್ರಿಯಂವದ, ನಗರ ಠಾಣಾ ಎಸ್ಐ ಮುರಳೀಧರ ನಾಯಕ, ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.