ADVERTISEMENT

ಕಾರ್ಕಳ ಪಳ್ಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 7:06 IST
Last Updated 23 ಫೆಬ್ರುವರಿ 2026, 7:06 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಕಾರ್ಕಳ: ತಾಲ್ಲೂಕಿನ ಪಳ್ಳಿ ಗ್ರಾಮದ ದಿಡಿಂಬೆಟ್ಟು ಜಗದೀಶ ಸಾಧು ಪೂಜಾರಿ ಎಂಬುವರು ತೆಂಗಿನಕಾಯಿ ಕೀಳುತ್ತಿರುವಾಗ ಬಿದ್ದು ಮೃತಪಟ್ಟಿದ್ದಾರೆ.

ADVERTISEMENT

ಬೆಳಗಾವಿಯ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 25 ದಿನಗಳ ಹಿಂದೆ ಊರಿಗೆ ಬಂದಿದ್ದರು. ಮನೆ ಬಳಿ ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ದೋಟಿಯಿಂದ ತೆಂಗಿನಕಾಯಿ ಕೀಳುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಅವರ ಮೂಗಿನಲ್ಲಿ ರಕ್ತಸ್ರಾವ ಆಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.