ADVERTISEMENT

ಕಾರ್ಕಳ: ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಣೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:56 IST
Last Updated 4 ಸೆಪ್ಟೆಂಬರ್ 2024, 15:56 IST
ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬುಧವಾರ ‘ಪ್ರಜಾವಾಣಿ’ ಪತ್ರಿಕೆ ವಿತರಿಸಲಾಯಿತು
ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬುಧವಾರ ‘ಪ್ರಜಾವಾಣಿ’ ಪತ್ರಿಕೆ ವಿತರಿಸಲಾಯಿತು   

ಕಾರ್ಕಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆಯು ಉಪಯುಕ್ತ ದಿಕ್ಕೂಚಿಯಾಗಿದೆ ಎಂದು ಕಾರ್ಕಳ ರೋಟರಿ ಕ್ಲಬ್‌ ಕಾರ್ಯದರ್ಶಿ ಗಣೇಶ ಸಾಲ್ಯಾನ್ ಹೇಳಿದರು.

ಇಲ್ಲಿನ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಕಳ ರೋಟರಿ ಕ್ಲಬ್‌ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಪ್ರಜಾವಾಣಿ’ ಪತ್ರಿಕೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ಪ್ರಜಾವಾಣಿ’ ಪತ್ರಿಕೆ ವಿತರಿಸಲಾಯಿತು.

ADVERTISEMENT

ಪತ್ರಿಕೆಯ ಮಂಗಳೂರು ವಿಭಾಗದ ಪ್ರಸರಣಾಧಿಕಾರಿ ನಾಗೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವವರಿಗೆ ಮಾತ್ರವಲ್ಲ ಸಾಮಾಜಿಕ, ಆರ್ಥಿಕ, ಧಾರ್ಮಿಕ ಜಿಜ್ಞಾಸುಗಳಿಗೆ ‘ಪ್ರಜಾವಾಣಿ’ ಪತ್ರಿಕೆ ಸಾಕಷ್ಟು ಪೂರಕ ಮಾಹಿತಿ ನೀಡುತ್ತದೆ’ ಎಂದರು.

ಶಾಲಾ ಮುಖ್ಯಶಿಕ್ಷಕ ದಿವಾಕರ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸರಣ ವಿಭಾಗದ ಸತೀಶ್, ವರದಿಗಾರ ಸಿದ್ಧಾಪುರ ವಾಸುದೇವ ಭಟ್ ಇದ್ದರು. ಶಾಲಾ ಶಿಕ್ಷಕಿ ಶೈಲಜಾ ಹೆಗ್ಡೆ ಸ್ವಾಗತಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.