
ಪ್ರಜಾವಾಣಿ ವಾರ್ತೆಅಪಘಾತವಾಗಿರುವ ಸ್ಥಳದಲ್ಲಿ ಜನರು ಜಮಾಯಿಸಿರುವುದು
ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.
ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.