ಕಾರ್ಕಳ: ಇಲ್ಲಿನ ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಹಾಗೂ ಅಮ್ಮನ ನೆರವು ಟ್ರಸ್ಟ್ ಇವುಗಳ ಸಹಯೋಗದಲ್ಲಿ ತಾಲ್ಲೂಕಿನಾದ್ಯಂತ 1200 ಮಕ್ಕಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತರಿಸಲಾಯಿತು.
ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ಮಕ್ಕಳಿಗೆ ಬ್ಯಾಗ್ ಪುಸ್ತಕ ವಿತರಿಸುವ ಜೊತೆಗೆ ಸಮಾರೋಪ ಸಮಾರಂಭ ನಡೆಸಲಾಯಿತು.
ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಬೋಳ ರಾಜೇಶ್ ಕಾಮತ್, ನಗರ ಠಾಣೆಯ ನೂತನ ಎಸ್‌ಐ ಸಂದೀಪ್ ಶೆಟ್ಟಿ, ಅಮ್ಮನ ನೆರವು ಟ್ರಸ್ಟ್‌ನ ಸ್ಥಾಪಕ ಅವಿನಾಶ್ ಶೆಟ್ಟಿ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಎಚ್.ಸಿ. ಮೂರ್ತಿ, ಸತೀಶ್ ನಾಯ್ಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.