ಕಾರ್ಕಳ: ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿ.ಯು ಕಾಲೇಜಿನಲ್ಲಿ ಈಚೆಗೆ ವಿದ್ಯಾರಂಭ ಕಾರ್ಯಕ್ರಮವನ್ನು ನಡೆಯಿತು.
ಉಡುಪಿ ಅದಮಾರು ಮಠದ ಕಿರಿಯ ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಸರಸ್ವತಿ ವಂದನೆಯ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.
ಶ್ರೀಪಾದರು ವಿದ್ಯಾರ್ಥಿಗಳಿಗೆ ಸರಸ್ವತಿ ವಂದನೆಯ ಮುಖಾಂತರ ವಿದ್ಯಾ ಬೋಧನೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜೇಶ್ವರಿ ನ್ಯಾಷನಲ್ ಪಿ.ಯು ಕಾಲೇಜು ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ.ಎಸ್.ಮೂಡಿತ್ತಾಯ ಮತ್ತು ಎಸ್.ಕೆ.ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮೂಡುಬಿದಿರೆ ಇದರ ಅಧ್ಯಕ್ಷ ಜಿ. ರಾಮಕೃಷ್ಣ ಆಚಾರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ಶ್ವೇತ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್ ರೈ, ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಪ್ರದೀಪ್ ನಾಯ್ಕ್, ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಅಧ್ಯಕ್ಷ ಶ್ರೀಪತಿ ಭಟ್, ಕಾಲೇಜಿನ ಉಪ ಪ್ರಾಂಶುಪಾಲೆ ರಶ್ಮಿ ಇದ್ದರು.
ಪೂರ್ಣಿಮಾ ಗೋರೆ ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಚಿನ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.